Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು ಹೆಣ್ಣುಮಕ್ಕಳು ಗಂಡಾಳು ಹೆಣ್ಣಾಳು ಎತ್ತು ಕತ್ತೆ ಪಶುಗಳು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:14
13 ತಿಳಿವುಗಳ ಹೋಲಿಕೆ  

ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.


ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.


ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.


“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು