ಧರ್ಮೋಪದೇಶಕಾಂಡ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |