Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:26
19 ತಿಳಿವುಗಳ ಹೋಲಿಕೆ  

ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.


ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು