Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:32
26 ತಿಳಿವುಗಳ ಹೋಲಿಕೆ  

ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.


ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.


ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.


ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.


ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.


ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು