Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:8
7 ತಿಳಿವುಗಳ ಹೋಲಿಕೆ  

“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು