Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:13
29 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.


“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು