Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:16
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.


ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು