Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:18
23 ತಿಳಿವುಗಳ ಹೋಲಿಕೆ  

ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.


ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.


ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು