Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:21
21 ತಿಳಿವುಗಳ ಹೋಲಿಕೆ  

ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.


ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ


ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು