ಧರ್ಮೋಪದೇಶಕಾಂಡ 6:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ ಆತನು ಇಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯ ಭಕ್ತಿಯುಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |