Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:3
25 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.


ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.


ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.


ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು