Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:5
26 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.


ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’


ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.


ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.


ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,


ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.


ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ


ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.


ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು