Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:7
29 ತಿಳಿವುಗಳ ಹೋಲಿಕೆ  

ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.


ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?


ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು