Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:8
10 ತಿಳಿವುಗಳ ಹೋಲಿಕೆ  

ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು