ಧರ್ಮೋಪದೇಶಕಾಂಡ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.