Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಎಲ್ಲಾ ಜನರಿಗಿಂತ ನೀವು ಹೆಚ್ಚಾಗಿ ಆಶೀರ್ವದಿಸಲ್ಪಡುವಿರಿ. ಪ್ರತಿಯೊಂದು ಕುಟುಂಬದಲ್ಲಿ ಹೆಚ್ಚು ಮಕ್ಕಳಿರುವರು. ನಿಮ್ಮ ಹಸುಗಳು ಮರಿಗಳನ್ನು ಈಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:14
11 ತಿಳಿವುಗಳ ಹೋಲಿಕೆ  

ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.


ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು