ಧರ್ಮೋಪದೇಶಕಾಂಡ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
15 ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
15 ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.
15 ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
15 ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.