Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ಭಯಂಕರನಾದ ಮಹಾದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:21
35 ತಿಳಿವುಗಳ ಹೋಲಿಕೆ  

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.


ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.


ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,


ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,


ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು