Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿಮ್ಮ ದೇವರಾದ ಯೆಹೋವನು ಅವರನ್ನು ನಿವ್ಮಿುಂದ ಸೋಲಿಸಿ ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:23
11 ತಿಳಿವುಗಳ ಹೋಲಿಕೆ  

ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.


ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.


ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು