ಧರ್ಮೋಪದೇಶಕಾಂಡ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು. ಅಧ್ಯಾಯವನ್ನು ನೋಡಿ |