Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:4
14 ತಿಳಿವುಗಳ ಹೋಲಿಕೆ  

ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.


ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,


ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು