Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:16
21 ತಿಳಿವುಗಳ ಹೋಲಿಕೆ  

ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.


ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.


ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು