ಧರ್ಮೋಪದೇಶಕಾಂಡ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |