Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:20
10 ತಿಳಿವುಗಳ ಹೋಲಿಕೆ  

ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.


“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು