Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:12
16 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.


ನೀವು ಸ್ತ್ರೀಪುರುಷರ ರೂಪವನ್ನಾಗಲಿ,


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು