ಧರ್ಮೋಪದೇಶಕಾಂಡ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ. ಅಧ್ಯಾಯವನ್ನು ನೋಡಿ |
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.