ಧರ್ಮೋಪದೇಶಕಾಂಡ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಲ್ಲದೆ ಕಾದೇಶ್‍ಬರ್ನೇಯದಲ್ಲಿ ಯೆಹೋವನು ನಿಮಗೆ - ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ ಆತನನ್ನು ನಂಬದೆ ಆತನ ಮಾತನ್ನು ಅಲಕ್ಷ್ಯಮಾಡಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿ |