Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:5
26 ತಿಳಿವುಗಳ ಹೋಲಿಕೆ  

ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.


ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”


ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.


“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು