ಧರ್ಮೋಪದೇಶಕಾಂಡ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ. ಅಧ್ಯಾಯವನ್ನು ನೋಡಿ |