ನಹೂಮ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 [ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು. ಅಧ್ಯಾಯವನ್ನು ನೋಡಿ |