Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:15
21 ತಿಳಿವುಗಳ ಹೋಲಿಕೆ  

ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು