Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:2
42 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.


ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು