Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:3
33 ತಿಳಿವುಗಳ ಹೋಲಿಕೆ  

ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು