Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:6
31 ತಿಳಿವುಗಳ ಹೋಲಿಕೆ  

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.


ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.


ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.


ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು