ನಹೂಮ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ? ಅಧ್ಯಾಯವನ್ನು ನೋಡಿ |