Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:3
13 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.


ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.


ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;


“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.


ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.


ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.


ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,


ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು