ನಹೂಮ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು. ಅಧ್ಯಾಯವನ್ನು ನೋಡಿ |