Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅತಿಸುಂದರಿಯೂ ಮಂತ್ರತಂತ್ರನಿಪುಣಳೂ ಜನಾಂಗಗಳನ್ನು ತನ್ನ ಸೂಳೆತನದಿಂದ, ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ಸೂಳೆಯ ಲೆಕ್ಕವಿಲ್ಲದ ಸೂಳೆತನಗಳ ನಿವಿುತ್ತ ಇದೆಲ್ಲಾ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:4
10 ತಿಳಿವುಗಳ ಹೋಲಿಕೆ  

ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.


“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು