Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:2
12 ತಿಳಿವುಗಳ ಹೋಲಿಕೆ  

ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು