Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:3
33 ತಿಳಿವುಗಳ ಹೋಲಿಕೆ  

ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.


ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.


ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.


ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು