ನೆಹೆಮೀಯ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ, ಅಧ್ಯಾಯವನ್ನು ನೋಡಿ |