Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, ‘ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:8
10 ತಿಳಿವುಗಳ ಹೋಲಿಕೆ  

ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!


ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


“‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು