ನೆಹೆಮೀಯ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.