Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹಿಮಾಡಿದವರು ಇವರು: ಹಕಲ್ಯನ ಮಗ ನೆಹೆಮೀಯನೆಂಬ ದೇಶಾಧಿಪತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹಿಮಾಡಿದವರು - ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:1
11 ತಿಳಿವುಗಳ ಹೋಲಿಕೆ  

ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.


ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,


ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.


ಸೆರಾಯ, ಅಜರ್ಯ, ಯೆರೆಮೀಯ,


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.


ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು