ನೆಹೆಮೀಯ 10:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ವರುಷಕ್ಕೆ ಒಂದು ಶೆಕೆಲಿನ ಮೂರನೆಯ ಭಾಗವನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.