Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:33
7 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು