Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:36
14 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.


ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು