ನೆಹೆಮೀಯ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು. ಅಧ್ಯಾಯವನ್ನು ನೋಡಿ |