Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲೇವಿ ಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕ ಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲೇವಿಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:16
8 ತಿಳಿವುಗಳ ಹೋಲಿಕೆ  

ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.


ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.


ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು