ನೆಹೆಮೀಯ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೀಕನ ಮಗನೂ ಜಬ್ದೀಯ ಮೊಮ್ಮಗನೂ ಆಸಾಫನ ಮರಿಮಗನೂ ಪ್ರಾರ್ಥನಾಸಮಯದಲ್ಲಿ - ಕೃತಜ್ಞತಾಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡಿಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ ಗಾಲಾಲನ ಮೊಮ್ಮಗನೂ ಯೆದೂತೂನನ ಮರಿಮಗನೂ ಆದ ಅಬ್ದ ಎಂಬವರೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು), ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು. ಅಧ್ಯಾಯವನ್ನು ನೋಡಿ |